ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಕೇವಲ 0.05 ಮಿ.ಮೀ. ಮಳೆಯಾಗಿತ್ತು.
ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 1,348.74 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2,428.29 ಮಿ.ಮೀ. ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ 85.35 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ 2,215.04 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 3,629.23 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ 36.15 ಮಿ.ಮೀ., ಪೊನ್ನಂಪೇಟೆ ತಾಲ್ಲೂಕಿನಲ್ಲಿ 23.85 ಮಿ.ಮೀ., ಸೋಮವಾರಪೇಟೆ ತಾಲ್ಲೂಕಿನಲ್ಲಿ 22.85 ಮಿ.ಮೀ. ಹಾಗೂ ಕುಶಾಲನಗರ ತಾಲ್ಲೂಕಿನಲ್ಲಿ 16.80 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ಮಳೆ ಪ್ರಮಾಣ ಗಮನಿಸಿದರೆ, ಸಂಪಾಜೆಯಲ್ಲಿ 105.90 ಮಿ.ಮೀ., ಭಾಗಮಂಡಲದಲ್ಲಿ 105.20 ಮಿ.ಮೀ., ಮಡಿಕೇರಿಯಲ್ಲಿ 76.60 ಮಿ.ಮೀ. ಹಾಗೂ ನಾಪೋಕ್ಲಿನಲ್ಲಿ 53.70 ಮಿ.ಮೀ. ಮಳೆಯಾಗಿದೆ.
ಇನ್ನು ಶಾಂತಳ್ಳಿಯಲ್ಲಿ 46.80 ಮಿ.ಮೀ., ಹುದಿಕೇರಿಯಲ್ಲಿ 43.60 ಮಿ.ಮೀ., ವಿರಾಜಪೇಟೆಯಲ್ಲಿ 37.90 ಮಿ.ಮೀ., ಅಮ್ಮತ್ತಿಯಲ್ಲಿ 34.40 ಮಿ.ಮೀ. ಹಾಗೂ ಶ್ರೀಮಂಗಲದಲ್ಲಿ 29.50 ಮಿ.ಮೀ. ಮಳೆಯಾಗಿದೆ.
ಪೊನ್ನಂಪೇಟೆಯಲ್ಲಿ 14.20 ಮಿ.ಮೀ., ಬಾಳೆಲೆಯಲ್ಲಿ 8.10 ಮಿ.ಮೀ., ಸೋಮವಾರಪೇಟೆಯಲ್ಲಿ 22.30 ಮಿ.ಮೀ., ಶನಿವಾರಸಂತೆಯಲ್ಲಿ 12.80 ಮಿ.ಮೀ., ಕೊಡ್ಲಿಪೇಟೆಯಲ್ಲಿ 9.50 ಮಿ.ಮೀ., ಕುಶಾಲನಗರದಲ್ಲಿ 16.10 ಮಿ.ಮೀ. ಹಾಗೂ ಸುಂಟಿಕೊಪ್ಪದಲ್ಲಿ 17.50 ಮಿ.ಮೀ. ಮಳೆಯಾಗಿದೆ.
ಒಟ್ಟಾರೆ ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…