ಮಡಿಕೇರಿ: ನಾಳೆ ಅಂದರೆ ಅ.20 ರಿಂದ 25ನೇ ತಾರೀಖಿನವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆಯುವ 36 ನೇ ಸಬ್ ಜೂನಿಯರ್ ಯೋನೆಕ್ಸ್ ಸನ್ ರೈಸ್ ರಾಷ್ಟ್ರೀಯ ಬಾಡ್ಮಿಂಟನ್ ಪಂದ್ಯಾಟಕ್ಕೆ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯ ಆಯ್ಕೆಯಾಗಿದ್ದಾರೆ.
ಮಡಿಕೇರಿಯ ದೇಚೂರಿನ ಬೊಪ್ಪಂಡ ಕುಸುಮ ಹಾಗೂ ಭೀಮಯ್ಯ ಅವರ ಪುತ್ರಿಯಾದ ದಿಯಾ ಭೀಮಯ್ಯ ರಾಜ್ಯದ ಪ್ರಥಮ ಶ್ರೇಯಾಂಕಿತ ಆಟಗಾರ್ತಿಯಾಗಿದ್ದಾರೆ. ದಿಯಾ ಅವರು 17 ವರ್ಷದೊಳಗಿನ ಸಿಂಗಲ್ಸ್, ಡಬಲ್ಸ್ ಹಾಗು ಮಿಶ್ರಡಬಲ್ಸ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ಮಿಶ್ರ ಡಬಲ್ಸ್ ನಲ್ಲಿ ಮೈಸೂರಿನ ಅಮಿತ್ ರಾಜ್ ನಟರಾಜ್ ಮತ್ತು ಡಬಲ್ಸ್ ನಲ್ಲಿ ತಮಿಳುನಾಡಿನ ವರ್ನಾ ಪಿ ಅವರೊಂದಿಗೆ ಕೂಡಿ ಆಡಲಿದ್ದಾರೆ. ಇವರು ಮೈಸೂರಿನ ವಿದ್ಯಾಶ್ರಮ ಕಾಲೇಜಿನ ವಿದ್ಯಾರ್ಥಿನಿ.
ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ಮೇದುರ ಅರುಣ್ ಪೆಮ್ಮಯ್ಯ ಹಾಗೂ ಬೊಪ್ಪಂಡ ಭೀಮಯ್ಯ ಅವರ ಬಳಿ ತರಬೇತಿ ಪಡೆದಿದ್ದರು.