Mysore
23
few clouds

Social Media

ಸೋಮವಾರ, 26 ಜನವರಿ 2026
Light
Dark

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಡಾ.ಮಂತರ್ ಗೌಡ ಚಾಲನೆ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶುಕ್ರವಾರ ಚಾಲನೆ ನೀಡಿದರು.

ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ, ಈ ಬಾರಿ ಓಂಕಾರೇಶ್ವರ ದೇವಾಲಯ ಹಾಗೂ ಕೊಡಗಿನ ಜೇನು ಆಕರ್ಷಣೀಯವಾಗಿದ್ದು, ಗಮನ ಸೆಳೆಯುತ್ತಿದೆ. ಹಾಗೆಯೇ ಫಲಪುಷ್ಪ ಪ್ರದರ್ಶನದಲ್ಲಿ ಸೆಲ್ಫಿಗೂ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಪ್ರತೀ ವರ್ಷದಂತೆ ಈ ಬಾರಿಯು ಸಹ ಬಟಾಣಿ ಗಾರ್ಡನ್ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಈ ಬಾರಿ ನಾಲ್ಕು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಇದನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಸಲಹೆ ನೀಡಿದರು. 35 ಲಕ್ಷ ರೂ. ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಪ್ರವಾಸಿಗರು ಸೇರಿದಂತೆ ಎಲ್ಲರೂ ಸ್ವಚ್ಚತೆಗೆ ಒತ್ತು ನೀಡಬೇಕು ಎಂದರು.

ಕಳೆದ ಬಾರಿಯಂತೆ ಈ ಬಾರಿಯೂ ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಜವಾಹರ್ ಲಾಲ್ ನೆಹರು, ಸರದಾರ್ ವಲ್ಲಭಬಾಯಿ ಪಟೇಲ್, ಡಾ.ಎಪಿಜೆ ಅಬ್ದುಲ್ ಕಲಾಂ, ಸರ್.ಎಂ.ವಿಶ್ವೇಶ್ವರಯ್ಯ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ, ನಾಲ್ವಡಿ ಕೃಷ್ಣರಾಜ ಒಡೆಯರ್, ಸುಭಾಷ್‍ಚಂದ್ರ ಬೋಸ್, ಡಾ.ಮನಮೋಹನ್ ಸಿಂಗ್, ಕುವೆಂಪು, ಡಾ.ರಾಜಕುಮಾರ್, ಪುನೀತ್ ರಾಜ್‍ಕುಮಾರ್, ರೋಹನ್ ಬೋಪಣ್ಣ, ಸಚಿನ್ ತಂಡೂಲ್ಕರ್ ಹೀಗೆ ಸುಮಾರು 50 ಕ್ಕೂ ಹೆಚ್ಚು ಮಹನೀಯರ ಕಲಾಕೃತಿಗಳು ಗಮನ ಸೆಳೆಯುತ್ತಿರುವುದು ವಿಶೇಷವಾಗಿದೆ.

ಮಡಿಕೇರಿಯ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಸ್ಥಾನದ ಹೂವಿನ ಕಲಾಕೃತಿ, ಕರ್ನಾಟಕ ಜೇನಿನ ಹಾಗೂ ಕೊಡಗು ಜೇನಿನ ‘ಕೂರ್ಗ್ ಹನಿ’ ಬ್ರ್ಯಾಂಡ್‍ಗಳ ವಿವಿಧ ಕಲಾಕೃತಿಗಳು, ಮಕ್ಕಳು, ಮಹಿಳೆಯರಿಗೆ ಆಕರ್ಷಣೀಯ ಮನೋರಂಜನಾತ್ಮಕ ಹಾಗೂ ಫೋಟೋ ಪಾಯಿಂಟ್‍ಗಳ ಹೂವಿನ ವಿವಿಧ ಕಲಾಕೃತಿಗಳು, ವಿವಿಧ ಕಲಾಕೃತಿಗಳ ತರಕಾರಿ ಕೆತ್ತನೆ, ವಿವಿಧ ಹೂವಿನ ಕುಂಡಗಳ ಪ್ರದರ್ಶನ, ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಖಾಸಗಿ ಕಂಪನಿಗಳ ಮಳಿಗೆಗಳು, ವಿವಿಧ ನರ್ಸರಿಗಳ ಗಿಡಗಳ ಮಾರಾಟ ಮಳಿಗೆಗಳು ಆಕರ್ಷಿಸುತ್ತಿವೆ.

Tags:
error: Content is protected !!