ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶುಕ್ರವಾರ ಚಾಲನೆ ನೀಡಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ, ಈ ಬಾರಿ ಓಂಕಾರೇಶ್ವರ ದೇವಾಲಯ ಹಾಗೂ ಕೊಡಗಿನ ಜೇನು ಆಕರ್ಷಣೀಯವಾಗಿದ್ದು, ಗಮನ ಸೆಳೆಯುತ್ತಿದೆ. ಹಾಗೆಯೇ ಫಲಪುಷ್ಪ ಪ್ರದರ್ಶನದಲ್ಲಿ ಸೆಲ್ಫಿಗೂ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಪ್ರತೀ ವರ್ಷದಂತೆ ಈ ಬಾರಿಯು ಸಹ ಬಟಾಣಿ ಗಾರ್ಡನ್ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಈ ಬಾರಿ ನಾಲ್ಕು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಇದನ್ನು ಮತ್ತಷ್ಟು ವಿಸ್ತರಿಸಬೇಕು ಎಂದು ಸಲಹೆ ನೀಡಿದರು. 35 ಲಕ್ಷ ರೂ. ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಪ್ರವಾಸಿಗರು ಸೇರಿದಂತೆ ಎಲ್ಲರೂ ಸ್ವಚ್ಚತೆಗೆ ಒತ್ತು ನೀಡಬೇಕು ಎಂದರು.
ಕಳೆದ ಬಾರಿಯಂತೆ ಈ ಬಾರಿಯೂ ಮಹಾತ್ಮ ಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಜವಾಹರ್ ಲಾಲ್ ನೆಹರು, ಸರದಾರ್ ವಲ್ಲಭಬಾಯಿ ಪಟೇಲ್, ಡಾ.ಎಪಿಜೆ ಅಬ್ದುಲ್ ಕಲಾಂ, ಸರ್.ಎಂ.ವಿಶ್ವೇಶ್ವರಯ್ಯ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ, ನಾಲ್ವಡಿ ಕೃಷ್ಣರಾಜ ಒಡೆಯರ್, ಸುಭಾಷ್‍ಚಂದ್ರ ಬೋಸ್, ಡಾ.ಮನಮೋಹನ್ ಸಿಂಗ್, ಕುವೆಂಪು, ಡಾ.ರಾಜಕುಮಾರ್, ಪುನೀತ್ ರಾಜ್‍ಕುಮಾರ್, ರೋಹನ್ ಬೋಪಣ್ಣ, ಸಚಿನ್ ತಂಡೂಲ್ಕರ್ ಹೀಗೆ ಸುಮಾರು 50 ಕ್ಕೂ ಹೆಚ್ಚು ಮಹನೀಯರ ಕಲಾಕೃತಿಗಳು ಗಮನ ಸೆಳೆಯುತ್ತಿರುವುದು ವಿಶೇಷವಾಗಿದೆ.
ಮಡಿಕೇರಿಯ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಸ್ಥಾನದ ಹೂವಿನ ಕಲಾಕೃತಿ, ಕರ್ನಾಟಕ ಜೇನಿನ ಹಾಗೂ ಕೊಡಗು ಜೇನಿನ ‘ಕೂರ್ಗ್ ಹನಿ’ ಬ್ರ್ಯಾಂಡ್‍ಗಳ ವಿವಿಧ ಕಲಾಕೃತಿಗಳು, ಮಕ್ಕಳು, ಮಹಿಳೆಯರಿಗೆ ಆಕರ್ಷಣೀಯ ಮನೋರಂಜನಾತ್ಮಕ ಹಾಗೂ ಫೋಟೋ ಪಾಯಿಂಟ್‍ಗಳ ಹೂವಿನ ವಿವಿಧ ಕಲಾಕೃತಿಗಳು, ವಿವಿಧ ಕಲಾಕೃತಿಗಳ ತರಕಾರಿ ಕೆತ್ತನೆ, ವಿವಿಧ ಹೂವಿನ ಕುಂಡಗಳ ಪ್ರದರ್ಶನ, ವಿವಿಧ ಸರ್ಕಾರಿ ಇಲಾಖೆಗಳು ಹಾಗೂ ಖಾಸಗಿ ಕಂಪನಿಗಳ ಮಳಿಗೆಗಳು, ವಿವಿಧ ನರ್ಸರಿಗಳ ಗಿಡಗಳ ಮಾರಾಟ ಮಳಿಗೆಗಳು ಆಕರ್ಷಿಸುತ್ತಿವೆ.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…