ಕೊಡಗು: ಜಿಲ್ಲೆಯ ಹಲವೆಡೆ ಇಂದು ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯದಿಂದಲೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಇಂದು ಬೆಳಿಗ್ಗೆ 10.30ರ ಸುಮಾರಿಗೆ ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಈ ಬಗ್ಗೆ ಭೂ ವಿಜ್ಞಾನಿಗಳಿಗೆ ಜನರು ಮಾಹಿತಿ ನೀಡಿದ್ದಾರೆ.
ಅದೃಷ್ಟವಶಾತ್ ಯಾವುದೇ ರೀತಿಯ ಹಾನಿ ಹಾಗೂ ಸಾವು-ನೋವು ಸಂಭವಿಸಿಲ್ಲ. ಭೂಮಿ ಕಂಪಿಸಲು ಕಾರಣಗಳೇನು ಎಂಬುದನ್ನು ಭೂವಿಜ್ಞಾನಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.