Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

ಮಡಿಕೇರಿ| ಕಾಡಾನೆ ದಾಳಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.

ತಾಲ್ಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್‌ ಮಾಜಿ ಸದಸ್ಯೆ ಜಲಜಾಕ್ಷಿ ಎಂಬುವವರೇ ಆನೆ ದಾಳಿಗೆ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.

ನಡೆದುಕೊಂಡು ಹೋಗುತ್ತಿದ್ದ ಜಲಜಾಕ್ಷಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಸಿಎಫ್‌ ಗೋಪಾಲ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ನಡೆಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

 

 

Tags:
error: Content is protected !!