ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.
ತಾಲ್ಲೂಕಿನ ವಾಲ್ನೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ನಂಜರಾಯಪಟ್ಟಣ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಜಲಜಾಕ್ಷಿ ಎಂಬುವವರೇ ಆನೆ ದಾಳಿಗೆ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.
ನಡೆದುಕೊಂಡು ಹೋಗುತ್ತಿದ್ದ ಜಲಜಾಕ್ಷಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಎಸಿಎಫ್ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…