ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಒಂಟಿ ಸಲಗ ಭಾರೀ ದಾಂಧಲೆ ನಡೆಸಿದೆ.
ಎಮ್ಮೆಗುಂಡಿ ರಸ್ತೆಯ ಮೂಲಕ ಬಂದ ಕಾಡಾನೆಯು ಗ್ರಾಮಗಳಿಗೆ ನುಗ್ಗಿ ದಾಂಧಲೆ ನಡೆಸಿದೆ. ಸುಂಟಿಕೊಪ್ಪದ ಅಯ್ಯಪ್ಪ ದೇವಾಲಯದ ಮುಂಭಾಗಕ್ಕೆ ಬಂದು ಶಾಂತಗೀರಿ ತೋಟಕ್ಕೆ ಹೋಗಿದ್ದ ಆನೆ ಬಡಾವಣೆ ನಿವಾಸಿಗಳಲ್ಲಿ ಭೀತಿಯನ್ನು ಉಂಟು ಮಾಡಿದೆ.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಯು ಅನೇಕ ದ್ವಿಚಕ್ರ ವಾಹನಗಳು ಹಾಗೂ ಮನೆ ಮುಂದ ನಿಲ್ಲಿಸಿದ್ದ ಕಾರುಗಳ ಮೇಲೆ ಅಟ್ಯಾಕ್ ಮಾಡಿದೆ.
ಅದೃಷ್ಟವಶಾತ್ ಈ ವೇಳೆ ಜನರ ಓಡಾಟ ಕಡಿಮೆಯಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಕಾಡಾನೆ ದಾಳಿಯಿಂದ ರೋಸಿಹೋಗಿರುವ ನಿವಾಸಿಗಳು ಇದನ್ನು ತಡೆಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾಡಾನೆಗಳು ನಾಡನತ್ತ ಬರದ ರೀತಿಯಲ್ಲಿ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.





