ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ.
ಕಾಡಾನೆ ದಾಳಿಯಿಂದ ಮೊಹಮ್ಮದ್ ಫೈಜನ್ ಮತ್ತು ಅಬುರ್ ಉವೈಸ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗೋಣಿಕೊಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಬೆಳ್ಳಂಬೆಳಿಗ್ಗೆಯೇ ತೀವ್ರ ದಾಂಧಲೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಆನೆ ದಾಳಿಯನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.
ಹೆಚ್ಚಿನ ಅನಾಹುತ ಆಗುವುದಕ್ಕೂ ಮುಂಚೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.





