ಕೊಡಗು

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮದೆನಾಡು ಗ್ರಾಮದ ನಿವಾಸಿ ದಿವಂಗತ ಪಟ್ಟಡ ಅಯ್ಯಪ್ಪ ಎಂಬುವವರ ಮಗ ಭರತ್‌ ಕುಮಾರ್‌ ಎಂಬುವವರೇ ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ದುರ್ದೈವಿಯಾಗಿದ್ದಾರೆ.

ರೆಸಾರ್ಟ್‌ ಒಂದರಲ್ಲಿ ಕೆಲಸ ಮಾಡುತ್ತಿರುವ ಭರತ್‌ ಕುಮಾರ್‌ ಎಂದಿನಂತೆ ತಮ್ಮ ಬೈಕಿನಲ್ಲಿ ಮದನಾಡು-ಬೆಟ್ಟತ್ತೂರು ರಸ್ತೆಯಲ್ಲಿ ಸಂಚರಿಸುತ್ತಿರುವ ಸಂದರ್ಭ ಸಾಲಪು ಎಂಬಲ್ಲಿ ರಸ್ತೆಯ ಮಧ್ಯೆ ದಿಢೀರನೇ ಪ್ರತ್ಯಕ್ಷವಾದ ಕಾಡಾನೆಗಳ ಹಿಂಡು ದಾಳಿ ಮಾಡಿ ಸೊಂಡಿಲಿನಲ್ಲಿ ಎಸೆದ ಪರಿಣಾಮ ಕಾಲು ಮುರಿತಗೊಂಡು ತಲೆಗೂ ಗಂಭೀರ ಗಾಯಗಳಾಗಿದೆ.

ಗಾಯಗೊಂಡಿರುವ ಭರತ್‌ ಕುಮಾರ್‌ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮೆರಿಕ-ಇರಾನ್‌ ಕದನ ವಿರಾಮ | ಶಾಂತಿ ಮಾತುಕತೆಗೆ ಪಾಕ್‌ಗೆ ಬಂದಿಳಿದ ಇರಾನ್‌ ನಿಯೋಗ

ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್…

1 hour ago

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಎಇಇ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ…

2 hours ago

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

3 hours ago

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

3 hours ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

4 hours ago

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…

4 hours ago