ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮದೆನಾಡು ಗ್ರಾಮದ ನಿವಾಸಿ ದಿವಂಗತ ಪಟ್ಟಡ ಅಯ್ಯಪ್ಪ ಎಂಬುವವರ ಮಗ ಭರತ್ ಕುಮಾರ್ ಎಂಬುವವರೇ ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ದುರ್ದೈವಿಯಾಗಿದ್ದಾರೆ.
ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿರುವ ಭರತ್ ಕುಮಾರ್ ಎಂದಿನಂತೆ ತಮ್ಮ ಬೈಕಿನಲ್ಲಿ ಮದನಾಡು-ಬೆಟ್ಟತ್ತೂರು ರಸ್ತೆಯಲ್ಲಿ ಸಂಚರಿಸುತ್ತಿರುವ ಸಂದರ್ಭ ಸಾಲಪು ಎಂಬಲ್ಲಿ ರಸ್ತೆಯ ಮಧ್ಯೆ ದಿಢೀರನೇ ಪ್ರತ್ಯಕ್ಷವಾದ ಕಾಡಾನೆಗಳ ಹಿಂಡು ದಾಳಿ ಮಾಡಿ ಸೊಂಡಿಲಿನಲ್ಲಿ ಎಸೆದ ಪರಿಣಾಮ ಕಾಲು ಮುರಿತಗೊಂಡು ತಲೆಗೂ ಗಂಭೀರ ಗಾಯಗಳಾಗಿದೆ.
ಗಾಯಗೊಂಡಿರುವ ಭರತ್ ಕುಮಾರ್ ಅವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…