ಕೊಡಗು

ಕೊಡಗು: ಕಾಡಾನೆ ದಾಳಿಗೆ ಕಾಫಿ ಪ್ಲ್ಯಾಂಟರ್‌ ಬಲಿ!

ಮಡಿಕೇರಿ: ಆನೆ ದಾಳಿಗೆ ಕಾಫಿ ಪ್ಲ್ಯಾಂಟರ್‌ ಒಬ್ಬರು ಬಲಿಯಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ನಡೆದಿದೆ.

ಶನಿವಾರ (ಮಾ ೨೩) ಬೆಳಗ್ಗೆ ಮನೆ ಸಮೀಪದ ತಮ್ಮ ಕಾಫಿ ತೋಟಕ್ಕೆ ಹೋದಾಗ ಆನೆ ದಾಳಿ ನಡೆಸಿದೆ. ಮೃತಪಟ್ಟ ದುರ್ದೈವಿಯನ್ನು ಕಂಬೆಯಂಡ ರಾಜ ದೇವಯ್ಯ(59) ಎಂದು ಗುರುತಿಸಲಾಗಿದೆ.

ಎಂದಿನಿಂತೆ ಬೆಳಿಗ್ಗೆ ಎದ್ದು ಮನೆಯಿಂದ ತೋಟದ ಕೆಲಸಕ್ಕೆ ಹೋಗಿದ್ದಾರೆ. ಅಲ್ಲಿ ಆನೆ ಅಲ್ಲಿಯೇ ನಿಂತಿದ್ದು, ಕೆಲಸದಲ್ಲಿ ನಿರತರಾದ ದೇವಯ್ಯ ಮೇಲೆ ದಿಢೀರನೇ ದಾಳಿ ಮಾಡಿ ಪ್ರಾಣ ತೆಗೆದಿದೆ.

ಈ ಸಂಬಂಧ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago