ವಿರಾಜಪೇಟೆ: ಕೊಡಗು ಜಿಲ್ಲೆಯ ತೋಟಗಳಲ್ಲಿ ಗುಂಪುಗುಂಪಾಗಿ ಬೀಡುಬಿಟ್ಟಿರುವ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಕಾಡಿಗಟ್ಟುವ ಕಾರ್ಯವಾಗಬೇಕು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಆಗ್ರಹಿಸಿದ್ದಾರೆ.
ಕಾಡಾನೆ ಮಾನವ ಸಂಘರ್ಷ, ವನ್ಯಜೀವಿಗಳ ಉಪಟಳ ಹಾಗೂ ರೈತರ ಸಮಸ್ಯೆ ಕುರಿತು ವಿರಾಜಪೇಟೆಯ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರ ಜೊತೆ ಸಭೆ ಆಯೋಜಿಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ಸ್ಥಳೀಯರು, ಕಾಡಾನೆಗಳನ್ನು ನಿಯಂತ್ರಿಸಲು ಅರಣ್ಯದಂಚಿನಲ್ಲಿ ನಿರ್ಮಾಣ ಮಾಡಿರುವ ಕಂದಕವನ್ನು ಆಳ ಮತ್ತು ಅಗಲವನ್ನು ವಿಸ್ತರಿಸಬೇಕು. ಕೆಲವು ಭಾಗಗಳಲ್ಲಿ ರೈಲ್ವೆ ಬ್ಯಾರಿಕೇಡ್ ಅಳವಡಿಸುವ ಕಾಮಗಾರಿ ಪೂರ್ಣಗೊಂಡಿಲ್ಲ. ಅರಣ್ಯದಂಚಿನಲ್ಲಿ ಕಾಡಾನೆಗಳನ್ನು ನಿಯಂತ್ರಣಗೊಳಿಸುವ ಸಲುವಾಗಿ ಅಳವಡಿಸಿರುವ ಸೋಲಾರ್ ಬೇಲಿಗಳನ್ನು ಶೀಘ್ರವಾಗಿ ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿದರು.
ಅರಣ್ಯ ಗಡಿ ಭಾಗಗಳಲ್ಲಿನ ಜನ ವಾಸಿಸುವ ಪ್ರದೇಶಗಳಲ್ಲಿ ವೀಕ್ಷಕ ಗೋಪುರ ನಿರ್ಮಿಸಿ ಕೃತಕ ಬುದ್ದಿಮತ್ತೆ ಕ್ಯಾಮರಾಗಳನ್ನು ಅಳವಡಿಸಬೇಕು. ವನ್ಯಜೀವಿ ಉಪಟಳಗಳಿಂದಾಗುವ ಹಾನಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು ಶೇ.20ರಷ್ಟು ಹೆಚ್ಚಿಸಬೇಕು. ಅರಣ್ಯ ಇಲಾಖೆಯು ಮತ್ತಿಗೋಡು ಅರಣ್ಯ ಪ್ರದೇಶದಲ್ಲಿ ನಡೆಸಿಕೊಂಡು ಬರುತ್ತಿರುವ ಪ್ರವಾಸೋದ್ಯಮ ಚಟುವಟಿಕೆಯನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿದರು.
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…