Mysore
19
clear sky

Social Media

ಗುರುವಾರ, 29 ಜನವರಿ 2026
Light
Dark

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ ನಡೆದಿದೆ.

ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಹಾಗೂ ಮಠ ಭಾಗದಿಂದ ಬಿಜಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ, ಕಾಫಿ ತೋಟದಿಂದ ಏಕಾಏಕಿ ರಸ್ತೆಗಿಳಿದ ಸಲಗ ಬಸ್ಸನ್ನು ಹಿಂಬಾಲಿಸಿದೆ. ಘಟನೆಯ ದೃಶ್ಯವನ್ನು ಬಸ್ ಚಾಲಕ ಸುನಿಲ್ ಅವರ ಪುತ್ರಿ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಘಟನೆ ನಡೆದ ಸ್ಥಳದ ಸಮೀಪದಲ್ಲಿ ಸುಮಾರು 10 ವಿದ್ಯಾರ್ಥಿಗಳು ಬಸ್‌ಗಾಗಿ ಕಾದು ಕುಳಿತಿದ್ದು, ಅಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ಆತಂಕಗೊಂಡ ಪೋಷಕರು ಹಾಗೂ ಸ್ಥಳೀಯರು ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಅಲಿ ಅವರಿಗೆ ಮಾಹಿತಿ ನೀಡಿದ್ದಾರೆ.

ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆ ಹಾವಳಿಯನ್ನು ತಡೆಯಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

 

Tags:
error: Content is protected !!