ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ ನಡೆದಿದೆ.
ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲ ಹಾಗೂ ಮಠ ಭಾಗದಿಂದ ಬಿಜಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ವೇಳೆ, ಕಾಫಿ ತೋಟದಿಂದ ಏಕಾಏಕಿ ರಸ್ತೆಗಿಳಿದ ಸಲಗ ಬಸ್ಸನ್ನು ಹಿಂಬಾಲಿಸಿದೆ. ಘಟನೆಯ ದೃಶ್ಯವನ್ನು ಬಸ್ ಚಾಲಕ ಸುನಿಲ್ ಅವರ ಪುತ್ರಿ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.
ಘಟನೆ ನಡೆದ ಸ್ಥಳದ ಸಮೀಪದಲ್ಲಿ ಸುಮಾರು 10 ವಿದ್ಯಾರ್ಥಿಗಳು ಬಸ್‌ಗಾಗಿ ಕಾದು ಕುಳಿತಿದ್ದು, ಅಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ಆತಂಕಗೊಂಡ ಪೋಷಕರು ಹಾಗೂ ಸ್ಥಳೀಯರು ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಅಲಿ ಅವರಿಗೆ ಮಾಹಿತಿ ನೀಡಿದ್ದಾರೆ.
ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆ ಹಾವಳಿಯನ್ನು ತಡೆಯಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…
ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್ ಸಿಎಂ ಸಿದ್ದರಾಮಯ್ಯ…