ಮಡಿಕೇರಿ: ಕಾಡಾನೆಯೊಂದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಒಂಟಿಯಂಗಡಿಯ ಪಚ್ಚಾಟ ಎಂಬಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆ ಹಾವಳಿ ಮಿತಿಮೀರಿತ್ತು. ಹೀಗೆ ಬಂದ ಸುಮಾರು 20 ವರ್ಷದ ಗಂಡು ಕಾಡಾನೆಯೊಂದು ಮುಕ್ಕಾಟೀರ ನಂದ ಎಂಬವರ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದೆ.
ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯ ಇಲಾಖೆ ಸಿಬ್ಬಂದಿ ಮುಂದಿನ ಕ್ರಮ ಕೈಗೊಂಡಿದ್ದಾರೆ.





