ಮಡಿಕೇರಿ: ಇಂಗು ಗುಂಡಿಗೆ ಬಿದ್ದ ಕಾಡಾನೆಯನ್ನು ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ವಿರಾಜಪೇಟೆ ತಾಲ್ಲೂಕಿನ ಕೆ.ಬೈಗೋಡು ಗ್ರಾಮದ ಗಣೇಶ್ ಎಂಬುವವರ ಮನೆ ಬಳಿ ಕಾಡಾನೆಯೊಂದು ಇಂಗು ಗುಂಡಿಗೆ ಬಿದ್ದು ನರಳಾಡುತ್ತಿತ್ತು.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆಗೆದು ಆನೆ ಹೊರಬರಲು ಸಹಾಯ ಮಾಡಿದರು.
ಗುಂಡಿಯಿಂದ ಹೊರ ಬಂದ ಬಳಿಕ ಕೆಲ ಸಮಯ ವಿಶ್ರಾಂತಿ ಪಡೆದುಕೊಂಡ ಆನೆ ಬಳಿಕ ನಿಧಾನವಾಗಿ ಅಯ್ಯಪ್ಪ ದೇವರ ಕಾಡಿನ ಕಡೆಗೆ ಹೋಯಿತು.
ಇನ್ನೂ ಈ ಭಾಗದಲ್ಲಿ ಕಾಡಾನೆಗಳ ಹಾವಳಿ ತುಂಬಾ ಜಾಸ್ತಿಯಾಗಿದ್ದು, ರಾತ್ರಿಯ ವೇಳೆ ಮನೆಯಿಂದ ಹೊರಬರಲು ಜನರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಆದಷ್ಟು ಬೇಗ ಆನೆಗಳ ಹಾವಳಿ ತಡೆಗಟ್ಟಬೇಕು ಎಂದು ಆಗ್ರಹಿಸಿದ್ದಾರೆ.
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…