Mysore
19
scattered clouds

Social Media

ಸೋಮವಾರ, 26 ಜನವರಿ 2026
Light
Dark

ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವೇಶ ನಿರ್ಭಂಧ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ.

ದುಬಾರೆ ಸಾಕಾನೆ ಶಿಬಿರದಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಮಟ್ಟವು ಹೆಚ್ಚಾಗುತ್ತಿದ್ದು, ಪ್ರವಾಸಿಗರನ್ನು ಸಾಕಾನೆ ಶಿಬಿರಕ್ಕೆ ದೋಣಿ ಮುಖಾಂತರ ನದಿ ದಾಟಿಸುವುದು ತುಂಬಾ ಕಷ್ಟಕರವಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದುಬಾರೆ ಸಾಕಾನೆ ಶಿಬಿರಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಿ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

Tags:
error: Content is protected !!