ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ.
ದುಬಾರೆ ಸಾಕಾನೆ ಶಿಬಿರದಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಮಟ್ಟವು ಹೆಚ್ಚಾಗುತ್ತಿದ್ದು, ಪ್ರವಾಸಿಗರನ್ನು ಸಾಕಾನೆ ಶಿಬಿರಕ್ಕೆ ದೋಣಿ ಮುಖಾಂತರ ನದಿ ದಾಟಿಸುವುದು ತುಂಬಾ ಕಷ್ಟಕರವಾಗಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದುಬಾರೆ ಸಾಕಾನೆ ಶಿಬಿರಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಿ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…
11 ಯೋಧರಿಗೆ ಗಂಭೀರ ಗಾಯ ಭದೇರ್ವಾ : ದೋಡಾ ಜಿಲ್ಲೆಯ ಥನಾಲಾದ ಮೇಲ್ಭಾಗದ ಪ್ರದೇಶದಲ್ಲಿನ ಭದೇರ್ವಾ-ಚಂಬಾ ರಸ್ತೆಯಲ್ಲಿ ಗುರುವಾರ ಸೇನಾ…
ಬೆಂಗಳೂರು : ಬಿಗ್ ಬಾಸ್ ಮುಗಿದ ಮೇಲೂ ಗಿಲ್ಲಿ ನಟನ ಕ್ರೇಜ್ ಕಮ್ಮಿಯಾಗಿಲ್ಲ. ಹೋದ ಕಡೆ, ಬಂದಕಡೆ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದು,…
ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…