ಮಡಿಕೇರಿ : ಮಾಜಿ ಸೈನಿಕ, ಖಾಸಗಿ ಸಂಸ್ಥೆಯ ಉದ್ಯೋಗಿ ಗಿರೀಶ್ ಎಂಬುವವರು ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಗಿರೀಶ್ ಅವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿದೆ. ಇವರು ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕುಶಾಲನಗರ ಪೊಲೀಸರು, ಅಗ್ನಿಶಾಮಕ ದಳ, ಎನ್ನಿ ಆರ್ಎಫ್ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಕುಶಾಲನಗರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





