ಕುಶಾಲನಗರ : ಟಿಪ್ಪರ್ ಹಾಗೂ ಇನ್ನಿತರ ಸರಕು ಸಾಗಣೆ ವಾಹನಗಳಲ್ಲಿ ಹೆಚ್ಚಿನ ಪ್ರಮಾಣದ ಸರಕುಸಾಗಣೆ ಮಾಡುತ್ತಿರುವುದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರದ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
ಕುಶಾಲನಗರ ವ್ಯಾಪ್ತಿಯಲ್ಲಿ ಬಹಳಷ್ಟು ವಾಹನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ತೂಕದ ಸರಕುಗಳನ್ನು ಸಾಗಿಸಲಾಗುತ್ತಿದೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಎಂ ಸ್ಯಾಂಡ್, ಮಣ್ಣು, ಜೆಲ್ಲಿ ಹಾಗೂ ಇನ್ನಿತರ ವಸ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಲೋಡ್ ಮಾಡಿದ ವಾಹನಗಳು ಸಂಚರಿಸುತ್ತಿವೆ. ರಸ್ತೆಯುದ್ದಕ್ಕೂ ಸರಕುಗಳು ಚೆಲ್ಲುತ್ತಿವೆ. ಇದರಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಜೆಲ್ಲಿ ಕಲ್ಲುಗಳು ವಾಹನಗಳ ಚಕ್ರಕ್ಕೆ ತಗುಲಿ ಪಾದಚಾರಿಗಳಿಗೆ ತೊಂದರೆಯಾಗುವ ಸಾಧ್ಯತೆಗಳಿವೆ.
ಈ ಹಿಂದೆ ಸಾರ್ವಜನಿಕರೊಬ್ಬರ ಕಣ್ಣಿಗೆ ತಗುಲಿ ಗಾಯವಾಗಿತ್ತು. ಬೈಕ್ ಸವಾರರು ವಾಹನ ಚಲಾಯಿಸಲು ತೊಂದರೆಯಾಗುತ್ತಿದೆ. ಹಲವು ಬಾರಿ ಬಿದ್ದು ಅಪಘಾತಗಳು ಸಂಭವಿಸಿವೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಯಾವುದೇ ಪ್ರಭಾವಕ್ಕೂ ಮಣಿಯದೆ ಹೆಚ್ಚಿನ ಪ್ರಮಾಣದ ಸರಕು ಸಾಗಿಸುತ್ತಿರುವ ಲಾರಿ,ಟಿಪ್ಪರ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…