ಕೊಡಗು

ವಾಹನಗಳಲ್ಲಿ ಹೆಚ್ಚಿನ ಸರಕು ಸಾಗಣೆ : ಕ್ರಮಕ್ಕೆ ಆಗ್ರಹ

ಕುಶಾಲನಗರ : ಟಿಪ್ಪರ್ ಹಾಗೂ ಇನ್ನಿತರ ಸರಕು ಸಾಗಣೆ ವಾಹನಗಳಲ್ಲಿ ಹೆಚ್ಚಿನ ಪ್ರಮಾಣದ ಸರಕುಸಾಗಣೆ ಮಾಡುತ್ತಿರುವುದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರದ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಕುಶಾಲನಗರ ವ್ಯಾಪ್ತಿಯಲ್ಲಿ ಬಹಳಷ್ಟು ವಾಹನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ತೂಕದ ಸರಕುಗಳನ್ನು ಸಾಗಿಸಲಾಗುತ್ತಿದೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಎಂ ಸ್ಯಾಂಡ್, ಮಣ್ಣು, ಜೆಲ್ಲಿ ಹಾಗೂ ಇನ್ನಿತರ ವಸ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಲೋಡ್ ಮಾಡಿದ ವಾಹನಗಳು ಸಂಚರಿಸುತ್ತಿವೆ. ರಸ್ತೆಯುದ್ದಕ್ಕೂ ಸರಕುಗಳು ಚೆಲ್ಲುತ್ತಿವೆ. ಇದರಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಜೆಲ್ಲಿ ಕಲ್ಲುಗಳು ವಾಹನಗಳ ಚಕ್ರಕ್ಕೆ ತಗುಲಿ ಪಾದಚಾರಿಗಳಿಗೆ ತೊಂದರೆಯಾಗುವ ಸಾಧ್ಯತೆಗಳಿವೆ.

ಈ ಹಿಂದೆ ಸಾರ್ವಜನಿಕರೊಬ್ಬರ ಕಣ್ಣಿಗೆ ತಗುಲಿ ಗಾಯವಾಗಿತ್ತು. ಬೈಕ್ ಸವಾರರು ವಾಹನ ಚಲಾಯಿಸಲು ತೊಂದರೆಯಾಗುತ್ತಿದೆ. ಹಲವು ಬಾರಿ ಬಿದ್ದು ಅಪಘಾತಗಳು ಸಂಭವಿಸಿವೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಯಾವುದೇ ಪ್ರಭಾವಕ್ಕೂ ಮಣಿಯದೆ ಹೆಚ್ಚಿನ ಪ್ರಮಾಣದ ಸರಕು ಸಾಗಿಸುತ್ತಿರುವ ಲಾರಿ,ಟಿಪ್ಪರ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

11 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

11 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

12 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

12 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

12 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

13 hours ago