ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶವನ್ನು ಬರೆದು ವಿಡಿಯೋವೊಂದನ್ನು ಹರಿಬಿಟ್ಟು ಕೋಮು ಸೌಹಾರ್ದತೆಗೆ ಧಕ್ಕೆ ತರುವಂತೆ ಮಾಡಿರುವ ಆರೋಪದಡಿ ಓರ್ವ ವ್ಯಕ್ತಿಯನ್ನು ಕೊಡಗು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳದ ನಿವಾಸಿಯಾಗಿರುವ ಪ್ರಸ್ತುತ ಉತ್ತರಪ್ರದೇಶ ರಾಜ್ಯದ ಮುಜಾಫರ್ ನಗರ ಜಿಲ್ಲೆ ಖತೋಲಿಯಲ್ಲಿರುವ ಸುಧಾಕರ್ ರಾವ್ (55) ಬಂಧಿತ ಆರೋಪಿ. ಇದೇ ಮಾ.19 ರಂದು ಸುಳ್ಳು ಸಂದೇಶ ಹರಿಬಿಟ್ಟ ಕುರಿತು ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…