Mysore
26
scattered clouds

Social Media

ಸೋಮವಾರ, 11 ಮೇ 2026
Light
Dark

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ಶನಿವಾರ ನಡೆದಿದೆ.

ಮೃತರನ್ನು ನಂಜನಗೂಡು ನಿವಾಸಿ ಶಿವಕುಮಾರ್ (25) ಹಾಗೂ ಕೇರಳದ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್ (27) ಎಂದು ಗುರುತಿಸಲಾಗಿದೆ.

ಅಪಘಾತವು ಅತ್ಯಂತ ಭೀಕರವಾಗಿದ್ದು, ಮೂರು ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಡಿಕ್ಕಿಯ ತೀವ್ರತೆಗೆ ಸವಾರರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿದು ಗೋಣಿಕೊಪ್ಪ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮುಂದಿನ ಕ್ರಮಕ್ಕಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!