ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ದುರಂತ ಘಟನೆ ಶನಿವಾರ ನಡೆದಿದೆ.
ಮೃತರನ್ನು ನಂಜನಗೂಡು ನಿವಾಸಿ ಶಿವಕುಮಾರ್ (25) ಹಾಗೂ ಕೇರಳದ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್ (27) ಎಂದು ಗುರುತಿಸಲಾಗಿದೆ.
ಅಪಘಾತವು ಅತ್ಯಂತ ಭೀಕರವಾಗಿದ್ದು, ಮೂರು ವಾಹನಗಳು ಸಂಪೂರ್ಣ ಜಖಂಗೊಂಡಿವೆ. ಡಿಕ್ಕಿಯ ತೀವ್ರತೆಗೆ ಸವಾರರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದು ಗೋಣಿಕೊಪ್ಪ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮುಂದಿನ ಕ್ರಮಕ್ಕಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…