ಮಡಿಕೇರಿ: ಮಡಿಕೇರಿ-ಮಂಗಳೂರು (Madikeri-Manglore) ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸುಟ್ಟು ಕರಕಲಾಗಿದೆ.
ಪುತ್ತೂರಿನಿಂದ ಮಡಿಕೇರಿ ಕಡೆಗೆ ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ ವೇಳೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಹತ್ತೇ ನಿಮಿಷದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:- ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು
ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





