ನಾಪೋಕ್ಲು: ಇಲ್ಲಿನ ಕಕ್ಕಬ್ಬೆ ಇಗ್ಗುತಪ್ಪ ನಾಲಡಿ ಬೆಟ್ಟ ಶ್ರೇಣಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ.
ಬುಧವಾರ ಸಂಜೆ ವೇಳೆ ಮಲ್ಮ, ಕಕ್ಕಬ್ಬೆ ವ್ಯಾಪ್ತಿಯ ಬೆಟ್ಟದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಅನೇಕ ಮರಗಳು ಹಾಗೂ ಪ್ರಾಣಿ ಪಕ್ಷಿಗಳು ಸುಟ್ಟು ಕರಕಲಾಗಿವೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮಡಿಕೇರಿ ಭಾಗಮಂಡಲ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.





