ಕೊಡಗು

ಮಡಿಕೇರಿ | ಅಂಚೆ‌ ಕಚೇರಿ‌ ಸೇರಿದಂತೆ ವಿವಿಧೆಡೆ ಕಳವು; ಮೂವರ ಬಂಧನ

ಮಡಿಕೇರಿ: ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟ್ಟಂಗಾಲ ಗ್ರಾಮದ ಅಂಚೆ ಕಚೇರಿ ಸೇರಿದಂತೆ ವಿವಿಧೆಡೆ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಕಕ್ಕಬ್ಬೆ ಗ್ರಾಮದ ನಾಲಡಿ ಕೆ.ಸಿ. ಅಶೋಕ(35), ಸೋಮವಾರಪೇಟೆ ಕಿಬ್ಬೆಟ್ಟ ಗ್ರಾಮದ ಕೆ.ಪಿ. ಕೀರ್ತಿ(25), ಸೋಮವಾರಪೇಟೆ ರೇಂಜರ್ ಬ್ಲಾಕ್‌ನ ರಿಯಾಜ್(26) ಬಂಧಿತ ಆರೋಪಿಗಳು.

2024ರ ನ.30ರಂದು ಬಿಟ್ಟಂಗಾಲ ಗ್ರಾಮದ ಅಂಚೆ ಕಚೇರಿಯ ಬಾಗಿಲು ಮುರಿದು ಖಜಾನೆ ಬಾಕ್ಸ್, ಸ್ಟಾಂಪ್‌ಗಳು, ಅಂಚೆ ಪಾಸ್ ಪುಸ್ತಕಗಳು ಮತ್ತು ಸಿಸಿಟಿವಿಯ ಡಿವಿಆರ್ ಅನ್ನು ಕಳವು ಮಾಡಿರುವ ಕುರಿತು ಪ್ರಕರಣ ದಾಖಲಾಗಿತ್ತು. ಜೊತೆಗೆ ಬಿಟ್ಟಂಗಾಲ ಗ್ರಾಮದ ನಿವಾಸಿ ಮಾಚಯ್ಯ ಎಂಬುವವರ ಮನೆಯ ಶೆಡ್‌ನಲ್ಲಿ ನಿಲ್ಲಿಸಿದ್ದ ಕೆಎ-04-ಎನ್-5010 ಸಂಖ್ಯೆಯ ಮಾರುತಿ ಓಮಿನಿ ವಾಹನ ಕಳ್ಳತನವಾಗಿರುವ ಬಗ್ಗೆಯೂ ದೂರು ಸ್ವೀಕರಿಸಲಾಗಿತ್ತು. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ಅಧಿಕಾರಿ, ಸಿಬ್ಬಂದಿಗಳು ಘಟನೆ ಸ್ಥಳಕ್ಕೆ ಭೇಟಿ ನೀಡಿ ಅಪರಾಧ ಕೃತ್ಯಕ್ಕೆ ಸಂಬಧಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆಹಾಕಿದ್ದರು.

ಪ್ರಕರಣಗಳ ಆರೋಪಿಗಳ ಪತ್ತೆಯ ಸಲುವಾಗಿ ವಿರಾಜಪೇಟೆ ಡಿಎಸ್‌ಪಿ ಮಹೇಶ್ ಕುಮಾರ್, ಸಿಪಿಐ ಅನೂಪ್ ಮಾದಪ್ಪ, ಪಿಎಸ್‌ಐಗಳಾದ ಲತಾ, ವಾಣಿಶ್ರೀ, ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು & ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.

ಈ‌ ಸಂಬಂಧ ಮಾಹಿತಿ ಸಂಗ್ರಹಿಸಿ ಫೆ.10ರಂದು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸದರಿ ಆರೋಪಿಗಳು ಗೋಣಿಕೊಪ್ಪ, ಭಾಗಮಂಡಲ, ಮಡಿಕೇರಿ ಗ್ರಾಮಾಂತರ ಹಾಗೂ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಚಿನ್ನ-ಬೆಳ್ಳಿ ಆಭರಣಗಳು, ದ್ವಿಚಕ್ರ ವಾಹನ ಹಾಗೂ ಮರ ಕುಯ್ಯುವ ಯಂತ್ರವನ್ನು ಕಳ್ಳತನ ನಡೆಸಿರುವುದು ಕೂಡ ತನಿಖೆಯಲ್ಲಿ ಕಂಡುಬಂದಿದೆ.
ಬಂಧಿತರಿಂದ ಸಿಸಿಟಿವಿ ಡಿವಿಆರ್ & ಖಜಾನೆ ಬಾಕ್ಸ್ ಮತ್ತು ರೂ.930 ಮೌಲ್ಯದ ಸ್ಟಾಂಪ್‌ಗಳು, ಮಾರುತಿ ಕಾರು, ಎರಡು ದ್ವಿಚಕ್ರ ವಾಹನಗಳು, ಮರ ಕುಯ್ಯುವ ಯಂತ್ರ, 1 ಏರ್ ಗನ್, 200 ಕೆ.ಜಿ. ಕಾಫಿ, ಕಾಳುಮೆಣಸು 250 ಕೆ.ಜಿ., 30 ಗ್ರಾಂ ಚಿನ್ನ, 229 ಗ್ರಾಂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ.
ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಸ್‌ಪಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

2 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

2 hours ago

ಭೂತ್ ಜೋಲೋಕಿಯಾ: ಖಾರ ಎನ್ನಬೇಕೋ ಇಲ್ಲಾ ಬೆಂಕಿಯ ಬಾಣ ಎನ್ನಬೇಕೋ

ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…

2 hours ago

ಬಿಕೋ ಎನ್ನುತ್ತಿರುವ ದುಬಾಯಿ ಬೀದಿಗಳು, ಭವಿಷ್ಯದ ಕಳವಳದಲ್ಲಿ ಅನಿವಾಸಿ ಭಾರತೀಯರು

ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…

2 hours ago

ಅನೈತಿಕ ಚಟುವಟಿಕೆಗಳ ತಾಣವಾದ ಬಾಬೂಜಿ ಭವನ

ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ  ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…

2 hours ago