ಮಡಿಕೇರಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಸಂಬಂಧ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿ ಡಾ.ಅನಿಲ್ ಧಾವನ್ ಅವರು ಮಡಿಕೇರಿ, ಕುಶಾಲನಗರ ಸೇರಿದಂತೆ ವಿವಿಧ ಕಡೆಗಳ ಹೋಟೆಲ್‍ಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹೋಟೆಲ್ ಮತ್ತು ರೆಸಾರ್ಟ್‍ಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ತಮ್ಮ ಆರೋಗ್ಯವು ಸಹ ಉತ್ತಮವಾಗಿರಬೇಕು ಎಂದು ಅನಿಲ್ ಧಾವನ್ ಅವರು ನಿರ್ದೇಶನ ನೀಡಿದರು.
ಆಹಾರ ಪದಾರ್ಥಗಳ ತಯಾರಕರು, ಮಾರಾಟಗಾರರು, ದಾಸ್ತಾನುದಾರರು ಶುಚಿತ್ವಕ್ಕೆ ಒತ್ತು ನೀಡಬೇಕು. ಗ್ರಾಹಕರಿಗೆ ಶುದ್ಧವಾದ ಆಹಾರವನ್ನು ಪೂರೈಸಬೇಕು ಎಂದು ಸೂಚಿಸಿದರು.
ಆಹಾರಕ್ಕೆ ಕೃತಕ ಬಣ್ಣಗಳನ್ನು ಬಳಸಬಾರದು. ಮೊಟ್ಟೆ, ಮೀನು, ಮಾಂಸದ ಪದಾರ್ಥಗಳನ್ನು ಸೂಕ್ತ ತಾಪಮಾನದಲ್ಲಿ ಸಂಗ್ರಹಿಸಿ ಬಳಕೆ ಮಾಡುವಂತಾಗಬೇಕು ಎಂದು ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತಾಲಯ ಸೂಚನೆಯಂತೆ ಎರಡು ದಿನಗಳ ಕಾಲ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…