ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ ಪರವಾನಗಿಯನ್ನು ರದ್ದು ಮಾಡಲಾಗಿದೆ.
ವಿದೇಶಿ ಮಹಿಳೆ ಮೇಲೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಲ್ಲಿ ಅಮೆರಿಕ ಮೂಲದ ಮಹಿಳೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರವಾಸೋದ್ಯಮ ಇಲಾಖೆ, ಆರೋಪಿತ ಹೋಂಸ್ಟೇಯ ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಕಳೆದ ಕೆಲವು ದಿನಗಳ ಹಿಂದೆ ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕುಟ್ಟ ಗ್ರಾಮದ ಖಾಸಗಿ ಹೋಂಸ್ಟೇಗೆ ಬಂದಿದ್ದರು. ಈ ವೇಳೆ ಹೋಂಸ್ಟೇಯ ಕುಕ್ ಆಗಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಮಹಿಳೆಯ ಪಾನೀಯಕ್ಕೆ ಮಾದಕ ದ್ರವ್ಯ ಬೆರೆಸಿ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಘಟನೆ ನಡೆದ ಬಳಿಕ ಮಹಿಳೆ ಸಹಾಯಕ್ಕಾಗಿ ಯತ್ನಿಸಿದಾಗ, ಹೋಂಸ್ಟೇ ಮಾಲೀಕ ವಿಶಾಲ್ ಸುಮಾರು ಮೂರು ದಿನಗಳ ಕಾಲ ವೈಫೈ ಸಂಪರ್ಕ ಕಡಿತಗೊಳಿಸಿ, ಮಹಿಳೆಗೆ ಹೊರಗಿನ ಜಗತ್ತಿನೊಂದಿಗೆ ಸಂಪರ್ಕ ಸಾಧಿಸಲು ಬಿಡದೆ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿತ್ತು.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈಗಾಗಲೇ ವೃಜೇಶ್ ಕುಮಾರ್ ಹಾಗೂ ಮಾಲೀಕ ವಿಶಾಲ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪ್ರವಾಸೋದ್ಯಮ ಇಲಾಖೆಯು, ಪ್ರವಾಸಿಗರ ಸುರಕ್ಷತೆಯಲ್ಲಿ ವಿಫಲವಾದ ಮತ್ತು ಅಕ್ರಮ ಎಸಗಿದ ಹಿನ್ನೆಲೆಯಲ್ಲಿ 2024ರ ಜನವರಿಯಲ್ಲಷ್ಟೇ ಪರವಾನಗಿ ಪಡೆದಿದ್ದ ಈ ಹೋಂಸ್ಟೇಯನ್ನು ಬಂದ್ ಮಾಡಿದೆ. ಜಿಲ್ಲೆಯ ಎಲ್ಲಾ ಹೋಂಸ್ಟೇಗಳು ಕಡ್ಡಾಯವಾಗಿ ಪ್ರವಾಸಿಗರ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…
ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…
ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…
ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…