ಮಡಿಕೇರಿ : ಕಾಡಾನೆ ದಾಳಿಯಿಂದ ಆರ್.ಆರ್ ಟಿ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಕೆದಕಲ್ ಬಳಿ ನಡೆದಿದೆ.
ಗಿರೀಶ್(35) ಸಾವನ್ನಪ್ಪಿದ ಆರ್.ಆರ್ ಟಿ ಸಿಬ್ಬಂದಿ, ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆಯ ವೇಳೆ ಗಿರಿಶ್ ಅವರ ಮೇಲೆ ಕಾಡಾನೆ ದಾಳಿ ನಡೆದಸಿದೆ.
ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಗಿರೀಶ್ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಮೃತ ಗಿರೀಶ್ ಅವರು ಕಳೆದ ಹಲವು ವರ್ಷಗಳಿಂದ ಆನೆಕಾಡು ಆರ್ ಆರ್ ಟಿ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.





