Mysore
22
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಮುಷ್ಕರ ; ಬೇಡಿಕೆ ಪರಿಶೀಲಿಸುವ ಭರವಸೆ ನೀಡಿದ ಸಚಿವರು

ಮಡಿಕೇರಿ: ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಮುಷ್ಕರ ಹಿನ್ನೆಲೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ ನೀಡಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಯಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಸಂರಕ್ಷಣಾಧಿಕಾರಿ, ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿಎಸ್ಸಿ ಅರಣ್ಯಶಾಸ್ತ್ರ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವ ಕುರಿತು ಮನವಿ ಸಲ್ಲಿಸಿದರು.

ಇದನ್ನು ಓದಿ: ಮೇಲುಕೋಟೆ | ನ.9ಕ್ಕೆ ಉಪರಾಷ್ಟ್ರಪತಿ ಆಗಮನ ; ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು ಹಾಗೂ ಶಾಸಕರು, ವಿದ್ಯಾರ್ಥಿಗಳ ಬೇಡಿಕೆ ಬಗ್ಗೆ ಚರ್ಚಿಸಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳ ಬೇಡಿಕೆಗಳ ಬಗ್ಗೆ ಪರಿಗಣಿಸುತ್ತೇವೆ ಎಂದು ಭರವಸೆ ನೀಡಿದರಲ್ಲದೆ, ಮುಷ್ಕರವನ್ನು ಕೈ ಬಿಡಲು ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಉನ್ನತ ಅಽಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!