Mysore
24
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು 

ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ ಟಾಟಾ ಕಾಫಿ ಮಾರ್ಗೋಳ್ಳಿ ಎಸ್ಟೇಟ್ ಹಾಗೂ ಮೈಲಪುರ ಎಸ್ಟೇಟ್‌ಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದೆ.

ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ, ತೆಂಗು, ಕಾಫಿ ಹಾಗೂ ಬಾಳೆ ಬೆಳೆಗಳನ್ನು ನಾಶಪಡಿಸುತ್ತಿದ್ದ ಸುಮಾರು 16 ಕ್ಕೂ ಹೆಚ್ಚು ಕಾಡಾನೆಗಳು (03 ಮರಿಗಳು ಸೇರಿ) ಇರುವ ಎರಡು ಪ್ರತ್ಯೇಕ ಹಿಂಡುಗಳನ್ನು ಕಾರ್ಯಾಚರಣೆ ಮೂಲಕ ಮಾಲ್ದಾರೆ ಮೀಸಲು ಅರಣ್ಯಕ್ಕೆ ಹಿಮ್ಮೆಟ್ಟಿಸಲಾಯಿತು.

ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಗಳ ಸೂಚನೆ ಮೇರೆಗೆ ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಜಗನ್ನಾಥ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಗೋಪಾಲ್ ಕೆ.ಪಿ. ಅವರ ನಿರ್ದೇಶನದಲ್ಲಿ, ವಲಯ ಅರಣ್ಯ ಅಧಿಕಾರಿ ಶ್ರೀ ಗಂಗಾಧರ್ ಅವರ ಮಾರ್ಗದರ್ಶನದಲ್ಲಿ ಚೆನ್ನಂಗಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಶಶಿ ಪಿ.ಟಿ. ಹಾಗೂ ದೇವರಾಜ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಕಾರ್ಯಾಚರಣೆಯಲ್ಲಿ ಆರ್‌ಆರ್‌ಟಿ ತಂಡದ ಶಂಕರ್, ಪ್ರಜ್ವಲ್, ಈಟಿಎಫ್ ಉಪ ವಲಯ ಅರಣ್ಯಾಧಿಕಾರಿ ದೇವರಾಜ್ ಮತ್ತು ಸಿಬ್ಬಂದಿಗಳು, ಟಾಟಾ ಕಾಫಿ ವನ್ಯಜೀವಿ ವಿಭಾಗದ ವ್ಯವಸ್ಥಾಪಕ ಕಾರ್ತಿಕ್ ಕೃಷ್ಣ, ಮಾರ್ಗೋಳ್ಳಿ ಎಸ್ಟೇಟ್ ಸಹಾಯಕ ವ್ಯವಸ್ಥಾಪಕ ಅನುಷ್ ಭಾಗವಹಿಸಿದ್ದರು.

ಇದೇ ವೇಳೆ ದುಬಾರೆ ಮೀಸಲು ಅರಣ್ಯಕ್ಕೆ ಹಿಮ್ಮೆಟ್ಟಿಸಲಾದ ಕಾಡಾನೆಗಳ ಹಿಂಡು ರಾತ್ರಿ ವೇಳೆ ಮತ್ತೆ ಕಾಡು ದಾಟಿ ತೋಟಗಳಿಗೆ ಲಗ್ಗೆ ಇಡುತ್ತಿರುವುದರಿಂದ ಅಪಾರ ಪ್ರಮಾಣದ ಕೃಷಿ ನಷ್ಟ ಸಂಭವಿಸುವ ಆತಂಕವಿದೆ. ಈ ಹಿನ್ನೆಲೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ತೋಟದ ಮಾಲೀಕರು ಒತ್ತಾಯಿಸಿದ್ದಾರೆ.

Tags:
error: Content is protected !!