ನವೀನ್ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು
ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ ಟಾಟಾ ಕಾಫಿ ಮಾರ್ಗೋಳ್ಳಿ ಎಸ್ಟೇಟ್ ಹಾಗೂ ಮೈಲಪುರ ಎಸ್ಟೇಟ್‌ಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದೆ.
ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ, ತೆಂಗು, ಕಾಫಿ ಹಾಗೂ ಬಾಳೆ ಬೆಳೆಗಳನ್ನು ನಾಶಪಡಿಸುತ್ತಿದ್ದ ಸುಮಾರು 16 ಕ್ಕೂ ಹೆಚ್ಚು ಕಾಡಾನೆಗಳು (03 ಮರಿಗಳು ಸೇರಿ) ಇರುವ ಎರಡು ಪ್ರತ್ಯೇಕ ಹಿಂಡುಗಳನ್ನು ಕಾರ್ಯಾಚರಣೆ ಮೂಲಕ ಮಾಲ್ದಾರೆ ಮೀಸಲು ಅರಣ್ಯಕ್ಕೆ ಹಿಮ್ಮೆಟ್ಟಿಸಲಾಯಿತು.
ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಗಳ ಸೂಚನೆ ಮೇರೆಗೆ ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಜಗನ್ನಾಥ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಗೋಪಾಲ್ ಕೆ.ಪಿ. ಅವರ ನಿರ್ದೇಶನದಲ್ಲಿ, ವಲಯ ಅರಣ್ಯ ಅಧಿಕಾರಿ ಶ್ರೀ ಗಂಗಾಧರ್ ಅವರ ಮಾರ್ಗದರ್ಶನದಲ್ಲಿ ಚೆನ್ನಂಗಿ ಶಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಶಶಿ ಪಿ.ಟಿ. ಹಾಗೂ ದೇವರಾಜ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಕಾರ್ಯಾಚರಣೆಯಲ್ಲಿ ಆರ್‌ಆರ್‌ಟಿ ತಂಡದ ಶಂಕರ್, ಪ್ರಜ್ವಲ್, ಈಟಿಎಫ್ ಉಪ ವಲಯ ಅರಣ್ಯಾಧಿಕಾರಿ ದೇವರಾಜ್ ಮತ್ತು ಸಿಬ್ಬಂದಿಗಳು, ಟಾಟಾ ಕಾಫಿ ವನ್ಯಜೀವಿ ವಿಭಾಗದ ವ್ಯವಸ್ಥಾಪಕ ಕಾರ್ತಿಕ್ ಕೃಷ್ಣ, ಮಾರ್ಗೋಳ್ಳಿ ಎಸ್ಟೇಟ್ ಸಹಾಯಕ ವ್ಯವಸ್ಥಾಪಕ ಅನುಷ್ ಭಾಗವಹಿಸಿದ್ದರು.
ಇದೇ ವೇಳೆ ದುಬಾರೆ ಮೀಸಲು ಅರಣ್ಯಕ್ಕೆ ಹಿಮ್ಮೆಟ್ಟಿಸಲಾದ ಕಾಡಾನೆಗಳ ಹಿಂಡು ರಾತ್ರಿ ವೇಳೆ ಮತ್ತೆ ಕಾಡು ದಾಟಿ ತೋಟಗಳಿಗೆ ಲಗ್ಗೆ ಇಡುತ್ತಿರುವುದರಿಂದ ಅಪಾರ ಪ್ರಮಾಣದ ಕೃಷಿ ನಷ್ಟ ಸಂಭವಿಸುವ ಆತಂಕವಿದೆ. ಈ ಹಿನ್ನೆಲೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹಾಗೂ ತೋಟದ ಮಾಲೀಕರು ಒತ್ತಾಯಿಸಿದ್ದಾರೆ.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…