ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿಕೆ ಬೆನ್ನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ.
ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 5,551 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದ್ದು, ಸಚಿವ ಈಶ್ವರ್ ಖಂಡ್ರೆ ಸೂಚನೆ ಮೇರೆಗೆ ಈಗ ತೆರವು ಕಾರ್ಯ ಶುರು ಮಾಡಲಾಗಿದೆ.
ಕೇರಳದ ವಯನಾಡು ಭೂಕುಸಿತ ದುರಂತದಿಂದ ಎಚ್ಚೆತ್ತ ರಾಜ್ಯ ಸರ್ಕಾರ ರಾಜ್ಯದಲ್ಲಿ ಅರಣ್ಯ ಒತ್ತುವರಿ, ಅಕ್ರಮ ತೋಟಗಳು ಹಾಗೂ ಅನಧಿಕೃತ ರೆಸಾರ್ಟ್‌ಗಳ ವಿರುದ್ಧ ಕ್ರಮ ಜರುಗಿಸಲು ಮುಂದಾಗಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅರಣ್ಯ ಒತ್ತುವರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅದರಂತೆ 2015ರ ನಂತರದ ಪ್ರಕರಣಗಳನ್ನು ಗುರುತಿಸಿ ಅರಣ್ಯ ಒತ್ತುವರಿ ತೆರವುಗೊಳಿಸಲಾಗುತ್ತಿದ್ದು, ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾಕಷ್ಟು ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಇನ್ನು ಕೊಡಗು ಜಿಲ್ಲೆಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳು ತೀರಾ ಕಡಿಮೆಯಿವೆ. ಬಹುತೇಕ ಪ್ರಕರಣಗಳು ಕಾಫಿ ತೋಟ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದಾಗಿದೆ. ಅದರಲ್ಲಿಯೂ ಸಣ್ಣ ಪ್ರಮಾಣದ ಒತ್ತುವರಿ ಪ್ರಕರಣಗಳೇ ಹೆಚ್ಚಿದ್ದು, ಇಂತಹ ಪ್ರಕರಣಗಳ ಒತ್ತುವರಿ ತೆರವು ಕಾರ್ಯ ಶುರುವಾಗಿದೆ.
ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ…
ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಉಸ್ತುವಾರಿ…
ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…
ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…
ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.…