ಕೊಡಗು

ಕೊಡಗಿನಲ್ಲಿ ಅರಣ್ಯ ಅತಿಕ್ರಮಣ ತೆರವು ಕಾರ್ಯ ಶುರು

ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿನ ಅರಣ್ಯ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿಕೆ ಬೆನ್ನಲ್ಲೇ ಅರಣ್ಯ ಇಲಾಖೆ ಒತ್ತುವರಿ ತೆರವು ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ.

ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 5,551 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದ್ದು, ಸಚಿವ ಈಶ್ವರ್‌ ಖಂಡ್ರೆ ಸೂಚನೆ ಮೇರೆಗೆ ಈಗ ತೆರವು ಕಾರ್ಯ ಶುರು ಮಾಡಲಾಗಿದೆ.

ಕೇರಳದ ವಯನಾಡು ಭೂಕುಸಿತ ದುರಂತದಿಂದ ಎಚ್ಚೆತ್ತ ರಾಜ್ಯ ಸರ್ಕಾರ ರಾಜ್ಯದಲ್ಲಿ ಅರಣ್ಯ ಒತ್ತುವರಿ, ಅಕ್ರಮ ತೋಟಗಳು ಹಾಗೂ ಅನಧಿಕೃತ ರೆಸಾರ್ಟ್‌ಗಳ ವಿರುದ್ಧ ಕ್ರಮ ಜರುಗಿಸಲು ಮುಂದಾಗಿದೆ.

ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಅರಣ್ಯ ಒತ್ತುವರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅವುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಅದರಂತೆ 2015ರ ನಂತರದ ಪ್ರಕರಣಗಳನ್ನು ಗುರುತಿಸಿ ಅರಣ್ಯ ಒತ್ತುವರಿ ತೆರವುಗೊಳಿಸಲಾಗುತ್ತಿದ್ದು, ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾಕಷ್ಟು ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನು ಕೊಡಗು ಜಿಲ್ಲೆಯಲ್ಲಿ ವಾಣಿಜ್ಯ ಉದ್ದೇಶಕ್ಕೆ ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳು ತೀರಾ ಕಡಿಮೆಯಿವೆ. ಬಹುತೇಕ ಪ್ರಕರಣಗಳು ಕಾಫಿ ತೋಟ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದಾಗಿದೆ. ಅದರಲ್ಲಿಯೂ ಸಣ್ಣ ಪ್ರಮಾಣದ ಒತ್ತುವರಿ ಪ್ರಕರಣಗಳೇ ಹೆಚ್ಚಿದ್ದು, ಇಂತಹ ಪ್ರಕರಣಗಳ ಒತ್ತುವರಿ ತೆರವು ಕಾರ್ಯ ಶುರುವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

1 hour ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

8 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

8 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

8 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

8 hours ago