ಮಡಿಕೇರಿ: ಭಾರೀ ಮಳೆಯಿಂದ ಪ್ರವಾಹಕ್ಕೆ ಒಳಗಾಗಿರುವ ಕಾವೇರಿ ನದಿ ತೀರದ ಪ್ರದೇಶಗಳಿಗೆ ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ವೇಳೆ ಸಿದ್ದಾಪುರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದರು. ಈ ವೇಳೆ ಸಂತ್ರಸ್ತರು ಶಾಶ್ವತ ಪುನರ್ವಸತಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್, ಕಾಂಗ್ರೆಸ್ ಸರ್ಕಾರ ಪರಿಹಾರ ವಿತರಣೆಗೆ ವಿಳಂಬ ಮಾಡುವುದು ಸರಿಯಲ್ಲ. ಕೂಡಲೇ ಸಂತ್ರಸ್ತರ ಬೇಡಿಕೆಯನ್ನು ಈಡೇರಿಸಿ ಶಾಶ್ವತ ಪುನರ್ ವಸತಿ ಕಲ್ಪಿಸಲಿ ಎಂದು ಒತ್ತಾಯಿಸಿದರು.
ಈ ಹಿಂದೆ ಶಾಶ್ವತ ಪರಿಹಾರದ ಚಿಂತನೆ ಮಾಡಿ ಜಾಗ ಗುರುತಿಸಲಾಗಿತ್ತು. ಸಂತ್ರಸ್ತರು ಸ್ಥಳದಿಂದ ತೆರಳಲು ಮುಂದಾಗಿರಲಿಲ್ಲ. ಆದರೆ, ಈಗ ಸಂತ್ರಸ್ತರು ಪುನರ್ ವಸತಿ ಸ್ಥಳಗಳಿಗೆ ತೆರಳಲು ಒಪ್ಪಿದ್ದಾರೆ. ಸರ್ಕಾರ ಆದಷ್ಟು ಬೇಗ ಶಾಶ್ವತ ವ್ಯವಸ್ಥೆಯನ್ನು ಮಾಡಬೇಕು ಎಂದರು.
ಎಂ.ಎಲ್.ಸಿ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ ಜಿ ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಿ.ಕೆ ಲೋಕೇಶ್ ಸೇರಿದಂತೆ ಮುಖಂಡರು ಹಾಜರಿದ್ದರು.
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…