ಮಡಿಕೇರಿ : ಒಂಟಿ ಮನೆಯೊಂದರಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ಬಳಿಯ ಬೇಗೂರು ಗ್ರಾಮದ ಸಮೀಪ ಶುಕ್ರವಾರ ನಡೆದಿದೆ.
ಗೌರಿ, ಕಾಳ, ನಾಗಿ ಹಾಗೂ ಕಾವೇರಿ ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಹತ್ಯಾಕಾಂಡದಿಂದ ಇಡೀ ಜಿಲ್ಲೆ ಬೆಚ್ಚಿ ಬಿದ್ದಿದೆ.
ಗೌರಿ, ಕಾಳ ಎಂಬುವವರ ಮಗಳಾದ ನಾಗಿ, ಪತಿ ಗಿರೀಶ ಎಂಬುವವನೊಂದಿಗೆ ವಾಶವಿದ್ದರು. ಪುತ್ರಿ ಕಾವೇರಿ ಸಹ ಇದ್ದರು. ಕೊಲೆ ಆರೋಪಿ ಗಿರೀಶ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.
ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಗಿರೀಶ್ ಪತ್ತೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಕನ್ನಡ ಚಿತ್ರರಂಗದಲ್ಲಿ ಹಲವರಿಗೆ ಸೂಕ್ತ ಅವಕಾಶ ಸಿಗದೆ, ಅವರ ಕುಟುಂಬದವರೇ ಚಿತ್ರ ನಿರ್ಮಾಣ ಮಾಡಿದ ಹಲವು ಉದಾಹರಣೆಗಳಿವೆ. ಈ ಸಾಲಿಗೆ…
ಕೊಡಗು: ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದ್ದಾನೆ. ಇಂದು ಮಧ್ಯಾಹ್ನದಿಂದಲೂ ಜಿಲ್ಲೆಯ ಹಲವೆಡೆ…
ಮಂಡ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಏಪ್ರಿಲ್ 16 ಮತ್ತು 17ರಂದು ನಡೆಯುವ ಸಿ.ಇ.ಟಿ ಪರೀಕ್ಷೆಯಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ…
ಹಾಸನ: 112 ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಹಾಸನ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಡೀ ದೇಶದಲ್ಲಿ ಭ್ರಷ್ಟಾಚಾದಲ್ಲಿ ಪ್ರಥಮ ಸ್ಥಾನ ಪಡೆದು ತಮ್ಮ ಸರ್ಕಾರದ ಲಂಚವತಾರ ಬಟಾ ಬಯಲು…
ಬೆಂಗಳೂರು: ಸುಪೀಂ ಕೋರ್ಟ್, ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ…