ಕೊಡಗು

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೈಸೂರು ಶಾಂತಿ ನಗರ ನಿವಾಸಿ ಹರ್ಷದ್ ಖಾನ್(೨೫), ಮೈಸೂರು ಬಿಡಿ ಕಾಲೋನಿಯ ಅಜೀತ್ ಸೇಟ್ ನಗರ ನಿವಾಸಿ ಮುಜಾಮಿಲ್ ಅಹಮ್ಮದ್(೪೬), ಅಪ್ಸಲ್ ಬಾಷಾ(೨೮), ಮೈಸೂರು ಕಲ್ಯಾಣ ಗಿರಿ ನಿವಾಸಿ ಸಾಕ್ಯೂಬ್(೩೨) ಬಂಧಿತ ಆರೋಪಿಗಳು.

ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಜಿ ಗ್ರಾಮದ ಹೆಗ್ಗಳ ಜಂಕ್ಷನ್ ಸಮೀಪ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ, ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ೫೭೬ ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಕಾರೊಂದನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ವಿರುದ್ಧ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ವಿರಾಜಪೇಟೆ ಉಪವಿಭಾಗ ಡಿವೈಎಸ್‌ಪಿ ಮಹೇಶ್ ಕುಮಾರ್, ವಿರಾಜಪೇಟೆ ವೃತ್ತ ಸಿಪಿಐ ಅನೂಪ್ ಮಾದಪ್ಪ, ವಿರಾಜಪೇಟೆ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಮೋದ್, ಎಎಸ್‌ಐ ಟಿ.ಪಿ. ಮಂಜುನಾಥ, ಸಿಬ್ಬಂದಿಗಳಾದ ಬಿ.ಎಂ. ಹೇಮಂತ್ ಕುಮಾರ, ತೇಜಸ್ ಕುಮಾರ್, ಎನ್.ಆರ್. ಹರೀಶ್, ಸಾಗರ್, ಕುಮಾರ, ಮುದಿಯಜ್ಜಳ ಭೀಮಾಜ್ಜ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಸ್‌ಪಿ ಆರ್.ಎನ್. ಬಿಂದು ಮಣಿ ಶ್ಲಾಘಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

2 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

3 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

3 hours ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

3 hours ago

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ವಿದ್ಯಾರ್ಥಿ ಜೀವನದ 2ನೇ ಅತಿ ಮಹತ್ವದ ಘಟ್ಟ ಎನಿಸಿದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ರಾಜ್ಯಾದ್ಯಂತ ನಾಳೆ ಪ್ರಕಟವಾಗಲಿದೆ.…

3 hours ago