ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೆಲ್ಲಿಹುದಿಕೇರಿಯ ಬೆಟ್ಟದ ಕಾಡುವಿನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅನ್ಸಾದ್ ಮತ್ತು ಅಫ್ರಿದ್ ಎಂಬುವರನ್ನು ಬಂಧಿಸಿ ಗಾಂಜಾ ಸೇರಿದಂತೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ.
ಸಿದ್ದಾಪುರದಲ್ಲಿ ನಡೆದ ಮತೊಂದು ಪ್ರಕರಣದಲ್ಲಿ ಮಾರುಕಟ್ಟೆಯಲ್ಲಿ ಗಾಂಜಾ ಸೇವನೆ ಮಾಡಿ ಗಲಾಟೆ ಮಾಡುತ್ತಿದ್ದ ಅಲ್‌ಬಾದ್(೩೪) ಟೆಸನ್ ಜೋಸೆಫ್ (೨೮) ಎಂಬ ಇಬ್ಬರನ್ನು ಬಂಧಿಸಲಾಗಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ಸಂದರ್ಭ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.





