ಮಡಿಕೇರಿ: ಮಾರಾಟ ಮಾಡಲು ಗಾಂಜಾ ದಾಸ್ತಾನು ಇರಿಸಿದ್ದ ವ್ಯಕ್ತಿಯನ್ನು ಗೋಣಿಕೊಪ್ಪ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗೋಣಿಕೊಪ್ಪದ ಕಾವೇರಿ ಹಿಲ್ಸ್‌ನ ನಿವಾಸಿ ಅಬ್ದುಲ್ ಸಾಹಿಲ್ (22) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿ 600 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ಮೊಬೈಲ್, ಒಂದು ಟ್ಯಾಬ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿರಾಜಪೇಟೆ ಉಪವಿಭಾಗ ಡಿಎಸ್‌ಪಿ ಆರ್. ಮೋಹನ್‌ಕುಮಾರ್, ಸಿಪಿಐ ಶಿವರಾಜ ಮುಧೋಳ್, ಗೋಣಿಕೊಪ್ಪ ವೃತ್ತ ನಿರೀಕ್ಷಕ ರೂಪದೇವಿ ಬಿರಾದರ್, ಪಿಎಸ್‌ಐ ಕಾವೇರಪ್ಪ ಟಿ.ಎಂ. ಹಾಗೂ ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದರು. ಈ ವೇಳೆ ಮಾಲು ಸಮೇತ ಆರೋಪಿ ಬಂಧಿಸಿ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…
ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…
ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…
ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…
ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…