Mysore
33
scattered clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಗೋಣಿಕೊಪ್ಪ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಸಾವು

ಗೋಣಿಕೊಪ್ಪ: ಕೆರೆ ಬಳಿ ಆಟವಾಡುತ್ತಿದ್ದ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಅತ್ತೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆನ್ನಂಗೋಲ್ಲಿ ಸಮೀಪದ ಕೆ.ಕೆ.ತಿಮ್ಮಯ್ಯ ಅವರ ಕೆರೆಯಲ್ಲಿ ಈ ದುರ್ಘಟನೆ ನಡೆದುಹೋಗಿದೆ. ಲಾವಣ್ಯ ಎಂಬುವವಳೇ ಮೃತಪಟ್ಟ ದುರ್ದೈವಿಯಾಗಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಇಂದು ಕೆರೆಯ ದಡದಲ್ಲಿ ಆರು ವಿದ್ಯಾರ್ಥಿಗಳು ಆಟವಾಡುತ್ತಿದ್ದರು. ಲಾವಣ್ಯ, ಉಷಾ ಹಾಗೂ ಶೋಭಿತಾ ಆಟವಾಡುವ ಉತ್ಸಾಹದಲ್ಲಿ ಕೆರೆಗೆ ಹಾರಿದ್ದಾರೆ. ತೋಟಕ್ಕೆ ನೀರು ಹಾಯಿಸಿದ್ದರಿಂದ ಕೆರೆಯಲ್ಲಿ ನೀರು ಬತ್ತಿ ಹೋಗಿ ಕೆಸರಿನಿಂದ ತುಂಬಿತ್ತು. ಈ ಮೂವರು ಮಕ್ಕಳು ಕೆಸರಿನಲ್ಲಿ ಸಿಲುಕಿಕೊಂಡು ಕಿರುಚಾಡಿದ್ದಾರೆ.

ದಡದ ಮೇಲಿದ್ದ ಮೂರು ಮಕ್ಕಳು ಸಮೀಪದ ಪೋಷಕರಿಗೆ ಮಾಹಿತಿ ಮುಟ್ಟಿಸಲು ಹೋದಾಗ, ಈ ಮಾರ್ಗದ ಮೂಲಕ ಹಾದು ಹೋಗುತ್ತಿದ್ದ ಕಾರ್ಮಿಕರು ಮಕ್ಕಳನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಕೆಸರಿನಲ್ಲಿ ಸಿಲುಕಿದ ಇಬ್ಬರು ಮಕ್ಕಳನ್ನ ರಕ್ಷಿಸಲಾಗಿದ್ದು, ಈ ವೇಳೆಗಾಗಲೇ ಲಾವಣ್ಯಳ ಪ್ರಾಣ ಪಕ್ಷಿ ಹಾರಿಹೋಗಿದೆ. ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: