ಮಡಿಕೇರಿ : ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಇಲ್ಲದಾಗಿದೆ. ಇದೀಗ ಕಾಡಾನೆ ದಾಳಿಗೆ ಓರ್ವ ಕಾರ್ಮಿಕ ಬಲಿಯಾಗಿರುವ ಘಟನೆ ನಡೆದಿದೆ.
ಹನುಮಂತ(57) ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ. ವಿರಾಜಪೇಟೆ ತಾಲೂಕಿನ ಪಾಲಿ ಬೆಟ್ಟ ಸಮೀಪದ ಎಮ್ಮೆ ಗುಂಡಿ ಕಾಫಿ ತೋಟದಲ್ಲಿ ಕಾರ್ಮಿಕ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಜೊತೆಯಲಿದ್ದ ಮತ್ತೋರ್ವ ಕಾರ್ಮಿಕ ಪ್ರಾಣಾಪಾಯದಿಂದ ಪಾರಗಿದ್ದಾರೆ.
ಇದನ್ನು ಓದಿ: ಆನೆ ದಾಳಿಗೆ ಶಾಲೆ ಕಾಂಪೌಂಡ್, ಪೈಪ್ ನಾಶ
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಸರ್ಕಾರ ಹಾಗೂ ಅರಣ್ಯ ಇಲಾಖೆಯ ನಿರ್ಲಕ್ಷವೇ ಕಾರಣ ದಾಳಿಗೆ ಕಾರಣವಾಗಿದೆ. ಪ್ರಾಣಿಗಳು ಮನುಷ್ಯರ ಮೇಲೆ ದಾಳಿ ಮಾಡುವುದನ್ನ ತಡೆಯಬೇಕು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.





