ಮಡಿಕೇರಿ: ನಗರದ ಮಹದೇವಪೇಟೆಯ ಚಿನ್ನಾಭರಣ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಸಂಜೆ ವೇಳೆಗೆ ಕಿಶೋರ್ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಪ್ರಮೋದ್ ಎಂಬವರ ಚಂದ್ರಿಕಾ ಜುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಮನೆ ಮಾಡಿತ್ತು. ಅಗ್ನಿಶಾಮಕ ದಳ, ಪೊಲೀಸರು ಮತ್ತು ಸ್ಥಳೀಯರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಘಟನೆಯಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.





