ಗೋಣಿಕೊಪ್ಪ : ಶಿಷ್ಟಾಚಾರ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಂ. ತಿಮ್ಮಯ್ಯ ಅವರನ್ನು ಅಮಾನತ್ತುಗೊಳಿಸಿ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
2024ರ ಜೂನ್ 16 ರಂದು ಗೋಣಿಕೊಪ್ಪದಲ್ಲಿ ನಡೆದ ತಡೆಗೋಡೆ ಉದ್ಘಾಟನೆ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಅವರನ್ನು ಆಹ್ವಾನಿಸದೆ ಅಧಿಕಾರಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಸ್ವತಃ ಸುಜಾ ಕುಶಾಲಪ್ಪ ಅವರು ವಿಧಾನ ಪರಿಷತ್ತಿನ ಹಕ್ಕು ಬಾಧ್ಯತಾ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿದ್ದರು. ಹೀಗಾಗಿ ಕರ್ನಾಟಕ ಸಿವಿಲ್ ಸೇವೆಗಳ ನಿಯಮಗಳ ಅಡಿಯಲ್ಲಿ ತಕ್ಷಣ ಜಾರಿಗೆ ಬರುವಂತೆ ಅಧಿಕಾರಿಯನ್ನು ಅಮಾನತ್ತುಗೊಳಿಸಲಾಗಿದೆ.





