Mysore
24
overcast clouds

Social Media

ಭಾನುವಾರ, 06 ಸೆಪ್ಟೆಂಬರ್ 2026
Light
Dark

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗೋಣಿಕೊಪ್ಪ ಪೊಲೀಸರು ಫುಟ್ ಪೆಟ್ರೋಲಿಂಗ್ ನಡೆಸಿದರು.

ಠಾಣಾಧಿಕಾರಿ ಕಾಳೇಗೌಡ ನೇತೃತ್ವದಲ್ಲಿ ಸಿಬ್ಬಂದಿಗಳು ಮಾರುಕಟ್ಟೆ ಪ್ರದೇಶದಲ್ಲಿ ಕಾಲ್ನಡಿಗೆ ಗಸ್ತು ನಡೆಸಿ, ರಸ್ತೆಯಲ್ಲಿ ಅನಧಿಕೃತವಾಗಿ ವಾಹನ ನಿಲುಗಡೆ ಮಾಡಿರುವುದು, ಸಾರ್ವಜನಿಕ ರಸ್ತೆಯನ್ನು ಅತಿಕ್ರಮಿಸಿ ಅಂಗಡಿಗಳನ್ನು ವಿಸ್ತರಿಸಿರುವುದು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು.

ಇದೇ ವೇಳೆ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಯಿತು. ಗಾಂಜಾ ಸೇರಿದಂತೆ ಎನ್‌ಡಿಪಿಎಸ್‌ ಕಾಯ್ದೆಗೆ ಸಂಬಂಧಿಸಿದ ಅಕ್ರಮ ಚಟುವಟಿಕೆಗಳು ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದರು. ಮಾರುಕಟ್ಟೆ ಪ್ರದೇಶದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ವ್ಯಾಪಾರಸ್ಥರಿಗೆ ಸೂಚಿಸಲಾಯಿತು. ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಿಗೆ ಪೊಲೀಸರು ಮನವಿ ಮಾಡಿದರು.

Tags:
error: Content is protected !!