ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗೋಣಿಕೊಪ್ಪ ಪೊಲೀಸರು ಫುಟ್ ಪೆಟ್ರೋಲಿಂಗ್ ನಡೆಸಿದರು.
ಠಾಣಾಧಿಕಾರಿ ಕಾಳೇಗೌಡ ನೇತೃತ್ವದಲ್ಲಿ ಸಿಬ್ಬಂದಿಗಳು ಮಾರುಕಟ್ಟೆ ಪ್ರದೇಶದಲ್ಲಿ ಕಾಲ್ನಡಿಗೆ ಗಸ್ತು ನಡೆಸಿ, ರಸ್ತೆಯಲ್ಲಿ ಅನಧಿಕೃತವಾಗಿ ವಾಹನ ನಿಲುಗಡೆ ಮಾಡಿರುವುದು, ಸಾರ್ವಜನಿಕ ರಸ್ತೆಯನ್ನು ಅತಿಕ್ರಮಿಸಿ ಅಂಗಡಿಗಳನ್ನು ವಿಸ್ತರಿಸಿರುವುದು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು.
ಇದೇ ವೇಳೆ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಯಿತು. ಗಾಂಜಾ ಸೇರಿದಂತೆ ಎನ್‌ಡಿಪಿಎಸ್ ಕಾಯ್ದೆಗೆ ಸಂಬಂಧಿಸಿದ ಅಕ್ರಮ ಚಟುವಟಿಕೆಗಳು ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದರು. ಮಾರುಕಟ್ಟೆ ಪ್ರದೇಶದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ವ್ಯಾಪಾರಸ್ಥರಿಗೆ ಸೂಚಿಸಲಾಯಿತು. ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಿಗೆ ಪೊಲೀಸರು ಮನವಿ ಮಾಡಿದರು.
ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…
ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…
‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…
ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…