ಮಡಿಕೇರಿ : ಕಾಮಗಾರಿಯೊಂದರ ಬಿಲ್ ಪಾಸ್ ಮಾಡಲು 25 ಸಾವಿರ ರೂ. ಲಂಚದ ಬೇಡಿಕೆಯಿಟ್ಟಿದ್ದ ಗ್ರಾ.ಪಂ. ಅಧ್ಯಕ್ಷರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಸಮೀಪದ ಹಂಡ್ಲಿ ಗ್ರಾ.ಪಂ. ಅಧ್ಯಕ್ಷೆ ಸುಧಾಹಿರೇಷ್ ಲೋಕಾಯುಕ್ತ ಬಲೆಗೆ ಬಿದ್ದ ಜನಪ್ರತಿನಿಧಿ. ಹಂಡ್ಲಿ ಗ್ರಾಮದ ಭರತ್ ಎಂಬವರ ಬಳಿ ಸುಧಾಹಿರೇಷ್ ಕಾಮಗಾರಿಗಳ ಬಿಲ್ ಪಾಸ್‌ಗೆ ೨೫,೦೦೦ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಭರತ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಬುಧವಾರ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಧಾಹಿರೇಷ್ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತಷ್ಟು ಭ್ರಷ್ಟಾಚಾರ ನಡೆದಿರುವ ಸಾಧ್ಯತೆಯಿದ್ದು, ಲೋಕಾಯುಕ್ತ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ಇದನ್ನೂ ಓದಿ: ಬಿಗ್‌ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋಸ್
ಲೋಕಾಯುಕ್ತ ಇನ್ಸ್‌ಪೆಕ್ಟರ್ ಲೋಕೇಶ್ ಮತ್ತು ವೀಣಾ ನಾಯಕ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.





