ಕೊಡಗು : ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇದ್ದರೂ ಸಹ ಕೊಡಗಿನ ಖಾಸಗಿ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಲ್ಲಿ ಮದ್ಯ ಪೂರೈಕೆಗೆ ಅನುಮತಿ ನೀಡುವಂತೆ ಅಬಕಾರಿ ಇಲಾಖೆಗೆ ರಾಜ್ಯ ಜಂಟಿ ಚುನಾವಣಾಧಿಕಾರಿ ಸೂಚನೆ ನೀಡಿದ್ದಾರೆ. ಇದರಿಂದ ಕೊಡವರಿಗೆ ಸಂತೋಷನ್ನುಂಟು ಮಾಡಿದೆ.
ಕೊಡವರ ಮದುವೆಗಳಲ್ಲಿ ಮುಕ್ತವಾದ ಬಾರನ್ನೇ ತೆರೆದಿರಲಾಗುತ್ತದೆ. ಮದುವೆ ಸಮಾರಂಭದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮದ್ಯ ಸೇವಿಸಿ ಡಾನ್ಸ್ ಮಾಡಿ ಎಂಜಾಯ್ ಮಾಡುತ್ತಾರೆ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇದಕ್ಕೆಲ್ಲ ಬ್ರೇಕ್ ಹಾಕಿತ್ತು. ಮದುವೆ, ಸಮಾರಂಭಗಳಲ್ಲಿ ಮದ್ಯದ ವ್ಯವಸ್ಥೆ ಮಾಡಬಾರದು ಎಂದು ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಮದುವೆ ಇಟ್ಟುಕೊಂಡವರು ಕಂಗಾಲಾಗಿದ್ದರು.
ಈ ಹಿನ್ನೆಲೆಯಲ್ಲಿ ತಮ್ಮ ಸಂಪ್ರದಾಯಕ್ಕೆ ಅಡ್ಡಿ ಮಾಡಬಾರದು ಎಂದು ಕೊಡವ ಸಮಾಜ , ಗೌಡ ಸಮಾಜ ಮನವಿ ಮಾಡಿದ್ದವು. ಮದುವೆಗಳಲ್ಲಿ ಮದ್ಯ ಪೂರೈಕೆ ನಿರ್ಬಂಧ ಆದೇಶ ಹಿಂಪಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದರಿಂದ ಇದೀಗ ನಿರ್ಬಂಧ ಸಡಿಲಿಸಿ ಆದೇಶ ಹೊರಡಿಸಲಾಗಿದೆ.
ಕೊಡಗು ಅಂದ್ರೆ ಅಲ್ಲಿ ಒಂದಲ್ಲೊಂದು ವಿಶೇಷ. ವೈಶಿಷ್ಟ್ಯ ಕಾಣಸಿಗುತ್ತದೆ. ಇಲ್ಲಿಯ ಆಚಾರ-ವಿಚಾರಗಳು ಕೂಡ ವಿಭಿನ್ನ. ಸದ್ಯ ವಿವಾಹವಾಗಲು ಚೈತ್ರ ಕಾಲವಾಗಿರುವುದರಿಂದ ಜಿಲ್ಲೆಯಲ್ಲಿ ಮದುವೆಯ ಭರಾಟೆ ಜೋರಾಗಿದೆ. ಇದೀಗ ಮದುವೆಗಳಲ್ಲಿ ಮದ್ಯ ಪಾರ್ಟಿಗೂ ಅವಕಾಶ ಸಿಕ್ಕಿದ್ದು, ಕೊಡವರ ಖುಷಿ ಮತ್ತಷ್ಟು ಹೆಚ್ಚಿಸಿದೆ.
ಕೊಡಗಿನಲ್ಲಿ ಮದುವೆ ಸೇರಿದಂತೆ ಯಾವುದೇ ಸಮಾರಂಭಗಳಲ್ಲಿ ಮುಕ್ತ ಬಾರ್ ಗಳನ್ನು ತೆರೆಯುವುದಕ್ಕೆ ಅವಕಾಶ ಇಲ್ಲ. ಮುಕ್ತ ಬಾರ್ ತೆರೆಯಲು ಅವಕಾಶ ನೀಡಿದರೆ ಅದನ್ನು ದುರುಪಯೋಗ ಪಡಿಸಿಕೊಂಡು ಮತದಾರರಿಗೆ ಮದ್ಯ ಹಂಚಿಕೆ ಮಾಡುವ ಸಾಧ್ಯತೆ ಇರಬಹುದು ಎಂದು ಚುನಾವಣಾ ಆಯೋಗ ಅದಕ್ಕೆ ಕಡಿವಾಣ ಹಾಕಿತ್ತು.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…