ಸಚಿವ ಸಂಪುಟ ಪುನರ್ರಚನೆ ಊಹಾಪೋಹ
ಮಡಿಕೇರಿ: ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ, ಇವುಗಳಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆಯಿಲ್ಲ ಹಾಗೂ ಆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತವಾರಿ ಸಚಿವರಾದ ಎನ್ ಎಸ್ ಭೋಸರಾಜು ಪ್ರತಿಕ್ರಿಯಿಸಿದರು.
ಇಂದು ವಿರಾಜಪೇಟೆ ತಾಲ್ಲೂಕಿನ ಬೊಳ್ಳಮಾಡು ಗ್ರಾಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ “ಬೇಲ್ ನಮ್ಮೆ” ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ ಯೋಜನೆಗಳಾಗಿವೆ. ನಮ್ಮ ಗ್ಯಾರಂಟಿ ಯೋಜನೆಗಳ ಅನ್ವಯ ಹಲವಾರು ರಾಜ್ಯಗಳು ಇದೇ ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿವೆ. ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಪರಿಣಾಮಗಳ ಬಗ್ಗೆ ಚರ್ಚೆ ಆಗಿದೆಯೇ ಹೊರತು, ಅವುಗಳನ್ನು ಕಡಿತಗೊಳಿಸುವ ನಿಟ್ಟಿನಲ್ಲಿ ಯಾವುದೇ ಚರ್ಚೆಗಳು ಆಗಿಲ್ಲ. ಈ ಯೋಜನೆಗಳೂ ಯಥಾಸ್ಥಿತಿಯಲ್ಲಿಯೇ ಮುಂದುವರೆಯಲಿವೆ ಎಂದು ಸ್ಪಷ್ಟಪಡಿಸಿದರು.
ಏಐಸಿಸಿ ವತಿಯಿಂದ ಆಯೋಜಿಸಲಾಗಿರುವ ಎಲ್ಲಾ ರಾಜ್ಯದ ರಾಜ್ಯಾಧ್ಯಕ್ಷರುಗಳ ಸಭೆಯಲ್ಲಿ ಪಾಲ್ಗೊಳ್ಳಲು ನಮ್ಮ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಸಚಿವ ಸಂಪುಟ ಪುನರ್ರಚನೆಯ ಬಗ್ಗೆ ಚರ್ಚೆ ಮಾಡಲು ಅಲ್ಲ. ಸಚಿವ ಸಂಪುಟ ಪುನರ್ರಚನೆ ಕೇವಲ ಉಹಾಪೋಹ ಎಂದು ಹೇಳಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…